1 Chronicles 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು.
Kannada BSI Bible 2016
ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಷನು ನಿಮ್ರೋದನನ್ನು ಪಡೆದನು. ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.
Kannada Bible (KNCL) BSI 2016
ಕೂಷನ ಮಗ ನಿಮ್ರೋದ; ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.