1 Chronicles 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಬೆರನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನ ಹೆಸರು ಪೆಲೆಗ್. ಇವನ ಜೀವಮಾನಕಾಲದಲ್ಲಿ ಭೂಲೋಕದ ಜನರು ತಮ್ಮತಮ್ಮ ಭಾಷೆಗನುಸಾರವಾಗಿ ಗುಂಪುಗುಂಪಾಗಿ ಪ್ರತ್ಯೇಕವಾದರು. ಪೆಲೆಗನ ತಮ್ಮನ ಹೆಸರು ಯೊಕ್ತಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್.
Kannada BSI Bible 2016
ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಇವನ ಕಾಲದಲ್ಲಿ ಭೂವಿುಯ ಜನಗಳು ವಿಂಗಡವಾದವು. ಇವನ ತಮ್ಮನ ಹೆಸರು ಯೊಕ್ತಾನ್.
Kannada Bible (KNCL) BSI 2016
ಏಬೆರನಿಗೆ ಇಬ್ಬರು ಮಕ್ಕಳು - ಪೆಲೆಗ್ ಎಂಬವನು ಒಬ್ಬ. ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಯೊಕ್ತಾನ ಎಂಬವನು ಇನ್ನೊಬ್ಬ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.