1 Chronicles 10:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರು ಸೌಲನ ಆಯುಧಗಳನ್ನು ತಮ್ಮ ದೇವರ ಆಲಯದಲ್ಲಿಟ್ಟರು. ಸೌಲನ ತಲೆಯನ್ನು ದಾಗೋನನ ದೇವಸ್ಥಾನದಲ್ಲಿ ತೂಗುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು. ಅವನ ತಲೆಯನ್ನು ದಾಗೋನನ ಗುಡಿಯಲ್ಲಿ ನೇತುಹಾಕಿದರು.
Kannada BSI Bible 2016
ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು; ಅವನ ಬುರುಡೆಯನ್ನು ದಾಗೋನನ ಗುಡಿಯಲ್ಲಿ ಜಡಿದರು.
Kannada Bible (KNCL) BSI 2016
ಸೌಲನ ಆಯುಧಗಳನ್ನು ತೆಗೆದುಕೊಂಡು ಹೋಗಿ ತಮ್ಮ ಒಂದು ಗುಡಿಯಲ್ಲಿಟ್ಟರು. ಸೌಲನ ತಲೆಯನ್ನು ತಮ್ಮ ದೇವರಾದ ದಾಗೋನನ ಗುಡಿಯಲ್ಲಿ ನೇತುಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನ ಆಯುಧಗಳನ್ನು ತಮ್ಮ ದೇವರುಗಳ ಮಂದಿರದಲ್ಲಿ ಇಟ್ಟು, ಅವನ ತಲೆಯನ್ನು ದಾಗೋನನ ಆಲಯದಲ್ಲಿ ನೇತುಹಾಕಿದರು.