1 Chronicles 10:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.
Kannada BSI Bible 2016
ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿದ್ದ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು ಅವರ ಎಲುಬುಗಳನ್ನು ಅಲ್ಲಿದ್ದ ಏಲಾವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸಮಾಡಿದರು.
Kannada Bible (KNCL) BSI 2016
ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.