1 Chronicles 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.
Kannada BSI Bible 2016
ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.
Kannada Bible (KNCL) BSI 2016
ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,