1 Chronicles 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ ಅವನು ಯೆಹೋವನ ಸಲಹೆಯನ್ನು ಪಡೆದುಕೊಳ್ಳುವ ಬದಲಾಗಿ ಮಾಟಮಂತ್ರ ಮಾಡುವ ಹೆಂಗಸಿನ ಬಳಿಗೆ ಹೋದನು. ಆದ್ದರಿಂದಲೇ ಯೆಹೋವನು ರಾಜ್ಯವನ್ನು ಸೌಲನಿಂದ ತೆಗೆದು ಇಷಯನ ಮಗನಾದ ದಾವೀದನಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.
Kannada BSI Bible 2016
ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನನ್ನು ಕೊಲ್ಲಿಸಿ ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.
Kannada Bible (KNCL) BSI 2016
ಆದುದರಿಂದ ಸರ್ವೇಶ್ವರ ಅವನನ್ನು ಕೊಲ್ಲಿಸಿ ಜೆಸ್ಸೆಯ ಮಗ ದಾವೀದನಿಗೆ ರಾಜ್ಯವನ್ನೊಪ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅವನನ್ನು ಕೊಂದುಹಾಕಿ, ರಾಜ್ಯವನ್ನು ಇಷಯನ ಮಗನಾದ ದಾವೀದನ ಕಡೆಗೆ ತಿರುಗಿಸಿದರು.