1 Chronicles 10:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿವಸ ಫಿಲಿಷ್ಟಿಯರು ಹೆಣಗಳ ಮೇಲಿರುವ ಬೆಲೆಬಾಳುವ ವಸ್ತುಗಳನ್ನು ದೋಚಲು ಬಂದರು. ಆಗ ಅವರಿಗೆ ಗಿಲ್ಬೋವ ಬೆಟ್ಟದ ಮೇಲೆ ಸೌಲ ಮತ್ತು ಅವನ ಗಂಡುಮಕ್ಕಳ ಶರೀರಗಳು ದೊರಕಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.
Kannada BSI Bible 2016
ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲುಕೊಳ್ಳುವದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವದನ್ನು ಕಂಡು
Kannada Bible (KNCL) BSI 2016
ಕಾಳಗದ ಮರುದಿನ ಫಿಲಿಷ್ಟಿಯರು ಸತ್ತವರ ಒಡವೆವಸ್ತುಗಳನ್ನು ಸುಲಿಗೆಮಾಡಲು ಹೋದಾಗ, ಗಿಲ್ಬೋವ ಬೆಟ್ಟದಲ್ಲಿ ಸೌಲ ಹಾಗೂ ಅವನ ಮಕ್ಕಳು ಸತ್ತುಬಿದ್ದಿರುವುದನ್ನು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಪುತ್ರರನ್ನೂ ಕಂಡರು.