1 Chronicles 10:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನ ಶರೀರದ ಮೇಲಿದ್ದ ಬೆಲೆಬಾಳುವ ವಸ್ತುಗಳನ್ನು ಅವರು ದೋಚಿಕೊಂಡರು; ಅವನ ತಲೆಯನ್ನೂ ಆಯುಧಗಳನ್ನೂ ತೆಗೆದುಕೊಂಡು ತಮ್ಮ ಊರಿನಲ್ಲಿದ್ದ ಜನರಿಗೂ ಅವರ ಸುಳ್ಳುದೇವರುಗಳಿಗೂ ತಿಳಿಸಲು ಸಂದೇಶಕರನ್ನು ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
Kannada BSI Bible 2016
ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನಿಗಿರುವದನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ದೇವತೆಗಳಿಗೂ ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
Kannada Bible (KNCL) BSI 2016
ಸೌಲನ ತಲೆಯನ್ನು ಕಡಿದು ದೇಹದಿಂದ ಬೇರ್ಪಡಿಸಿದರು. ಅವನ ಆಯುಧಗಳನ್ನು ಬಿಚ್ಚಿಕೊಂಡರು. ಅವುಗಳೊಂದಿಗೆ ಸುದ್ದಿವಾಹಕರನ್ನು ತಮ್ಮ ನಾಡಿನ ಎಲ್ಲೆಡೆಗೂ ಕಳುಹಿಸಿ, ಈ ಜಯವಾರ್ತೆಯನ್ನು ತಮ್ಮ ದೇವತೆಗಳಿಗೂ ಜನರಿಗೂ ಮುಟ್ಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನನ್ನು ಸುಲಿದುಕೊಂಡು ಅವನ ತಲೆಯನ್ನೂ, ಅವನ ಆಯುಧಗಳನ್ನೂ ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.