1 Chronicles 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಈ ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.
Kannada BSI Bible 2016
ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.
Kannada Bible (KNCL) BSI 2016
ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.