1 Chronicles 11:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಆ ಜವೆಗೋಧಿಯ ಹೊಲದಲ್ಲಿ ನಿಂತು ಕಾದಾಡಿದರು. ಫಿಲಿಷ್ಟಿಯರು ಸೋತುಹೋದರು. ಆ ದಿವಸ ಯೆಹೋವನು ಇಸ್ರೇಲರಿಗೆ ದೊಡ್ಡ ಜಯವನ್ನು ಉಂಟುಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.
Kannada BSI Bible 2016
ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವರಿಗೆ ಮಹಾ ಜಯವನ್ನುಂಟುಮಾಡಿದನು.
Kannada Bible (KNCL) BSI 2016
ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.