1 Chronicles 11:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾಹಗೊಂಡಿದ್ದ ದಾವೀದನು ತನ್ನ ಊರಿನ ನೀರು ಕುಡಿಯಲು ಬಯಸಿ, “ಬೆತ್ಲೆಹೇಮಿನ ನಗರದ್ವಾರದ ಬಳಿಯಲ್ಲಿರುವ ಬಾವಿಯಿಂದ ಯಾರಾದರೂ ನೀರು ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಅವನು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು.
Kannada BSI Bible 2016
ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದುರ್ಗದಲ್ಲಿದ್ದ ದಾವೀದನು ಲವಲವಿಕೆಯಿಂದ - ಬೇತ್ಲೆಹೇಮ್ ಊರಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವದಾದರೆ ಎಷ್ಟೋ ಒಳ್ಳೇದು ಎಂದು ಹೇಳಿದನು.
Kannada Bible (KNCL) BSI 2016
ದಾವೀದನು ತನ್ನೂರನ್ನು ಜ್ಞಾಪಿಸಿಕೊಂಡು ಅಸ್ವಸ್ಥನಾಗಿ ‘ಬೆತ್ಲೆಹೇಮಿನ ದ್ವಾರದ ಬಳಿಯಿರುವ ಬಾವಿಯಿಂದ ನನಗೆ ಕುಡಿಯಲು ಯಾರಾದರೂ ನೀರನ್ನು ತಂದುಕೊಡಬಲ್ಲಿರೋ!’ ಎಂದು ತನ್ನ ಅಪೇಕ್ಷೆಯನ್ನು ವ್ಯಕ್ತಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.