1 Chronicles 11:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರೇ, ನಾನು ಈ ನೀರನ್ನು ಕುಡಿಯಲಾರೆನು. ಯಾಕೆಂದರೆ ನನಗಾಗಿ ತಮ್ಮ ಪ್ರಾಣ ಕೊಡಲು ಹೆದರದೆ ನೀರನ್ನು ತಂದವರ ರಕ್ತವಿದು” ಎಂದು ದಾವೀದನು ಅರಿಕೆಮಾಡಿ ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ರೀತಿಯಾಗಿ ಅನೇಕ ಪರಾಕ್ರಮದ ಕಾರ್ಯಗಳನ್ನು ಈ ಮೂರು ಮಂದಿ ವೀರರು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.
Kannada BSI Bible 2016
ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಅದನ್ನು ಕುಡಿಯಲೊಲ್ಲದೆ - ತಮ್ಮ ಜೀವವನ್ನು ಸಮರ್ಪಿಸಿದ ಈ ಪುರುಷರ ರಕ್ತವನ್ನು ನಾನು ಕುಡಿಯಲೋ! ನನ್ನ ದೇವರು ಈ ಕಾರ್ಯವನ್ನು ನನಗೆ ದೂರಮಾಡಲಿ. ಅವರು ತಮ್ಮ ಜೀವವನ್ನೇ ಸಮರ್ಪಿಸಿ ಇದನ್ನು ತಂದುಕೊಟ್ಟರು. ನಾನು ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ.
Kannada Bible (KNCL) BSI 2016
ದಾವೀದನು ಆ ನೀರನ್ನು ಕುಡಿಯದೇ ಸರ್ವೇಶ್ವರನಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಈ ಮೂರು ಮಂದಿ ರಣವೀರರು ಸಾಧಿಸಿದ ಪರಾಕ್ರಮವಿದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗಿ ಮಾಡಲಿ. ನಾನು ಈ ಮನುಷ್ಯರ ಪ್ರಾಣದ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣದಾಶೆ ತೊರೆದು ಈ ನೀರನ್ನು ತಂದರಲ್ಲಾ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.