1 Chronicles 11:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಂದೆ ನೀನು ನಮ್ಮನ್ನು ಯುದ್ಧದಲ್ಲಿ ನಡೆಸಿರುವೆ. ಆಗ ಸೌಲನು ಅರಸನಾಗಿದ್ದರೂ ನೀನು ನಮ್ಮ ಯುದ್ಧದಲ್ಲಿ ನಾಯಕನಾಗಿದ್ದೆ. ಯೆಹೋವನು ನಿನಗೆ, ‘ದಾವೀದನೇ, ನೀನು ನಿನ್ನ ಜನರಾದ ಇಸ್ರೇಲರ ಪಾಲಕನಾಗಿರಬೇಕು. ನನ್ನ ಜನರಿಗೆ ನೀನು ನಾಯಕನಾಗಿರಬೇಕು”‘ ಎಂದು ಹೇಳಿದ್ದಾನಲ್ಲವೆ ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.
Kannada BSI Bible 2016
ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ನಿನ್ನ ದೇವರಾದ ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿ ಎಂದು ಹೇಳಿದ್ದಾನಷ್ಟೆ ಅಂದರು.
Kannada Bible (KNCL) BSI 2016
ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.