1 Chronicles 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
Kannada BSI Bible 2016
ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನಾದ ದಾವೀದನು ತನ್ನ ಹತ್ತಿರ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನಿಂದಾದ ಆಜ್ಞೆಗನುಸಾರವಾಗಿ ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.
Kannada Bible (KNCL) BSI 2016
ಹೀಗೆ ಇಸ್ರಯೇಲಿನ ನಾಯಕರೆಲ್ಲರೂ ಹೆಬ್ರೋನಿನಲ್ಲಿ ಅರಸ ದಾವೀದನ ಬಳಿಗೆ ಬಂದು ಬಿನ್ನವಿಸಿದರು. ದಾವೀದನು ಅವರೊಂದಿಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಒಂದು ಒಪ್ಪಂದ ಮಾಡಿಕೊಂಡನು. ಅವರು ಅವನನ್ನು ಅಭಿಷೇಕಿಸಿದರು. ಹೀಗೆ ಸರ್ವೇಶ್ವರ ಸಮುವೇಲನ ಮುಖಾಂತರ ಮಾಡಿದ ವಾಗ್ದಾನ ನೆರವೇರಿತು; ದಾವೀದನು ಇಸ್ರಯೇಲರ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.