1 Chronicles 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.
Kannada BSI Bible 2016
ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಇಸ್ರಾಯೇಲ್ಯರೆಲ್ಲರನ್ನೂ ಕರಕೊಂಡು ಯೆಬೂಸೆನಿಸಿಕೊಂಡಿದ್ದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು. ಆ ಪ್ರಾಂತದ ಮೂಲನಿವಾಸಿಗಳು ಯೆಬೂಸಿಯರು.
Kannada Bible (KNCL) BSI 2016
ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು.