1 Chronicles 11:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚೆರೂಯಳ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.
Kannada BSI Bible 2016
ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸ ದಾವೀದನು - ಯೆಬೂಸಿಯರನ್ನು ಯಾವನು ಮೊದಲು ಸೋಲಿಸುವನೋ ಅವನು ಪ್ರಮುಖನೂ ದಳಪತಿಯೂ ಆಗುವನು ಎಂದು ಹೇಳಲು ಚೆರೂಯಳ ಮಗನಾದ ಯೋವಾಬನು ಮೊದಲು ಹತ್ತಿದ್ದರಿಂದ ಅವನೇ ಪ್ರಮುಖನಾದನು.
Kannada Bible (KNCL) BSI 2016
‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.