1 Chronicles 12:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರೆಲ್ಲಾ ಗಾದ್ಯರ ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಅತಿಬಲಹೀನನಾದವನು ನೂರು ಮಂದಿ ವೈರಿಗಳೊಂದಿಗೆ ಕಾದಾಡಲು ಶಕ್ತನಾಗಿದ್ದನು. ಅವರಲ್ಲಿ ಎಲ್ಲರಿಗಿಂತ ಪರಾಕ್ರಮಿಯು ಒಂದು ಸಾವಿರ ವೈರಿಗಳೊಂದಿಗೆ ಕಾದಾಡಲು ಶಕ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು.
Kannada BSI Bible 2016
ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದ್ಯರಾದ ಇವರು ಸೈನ್ಯಾಧಿಪತಿಗಳಾಗಿದ್ದರು; ಇವರಲ್ಲಿ ಕನಿಷ್ಠನಾದವನು ನೂರು ಮಂದಿಗೆ ಸಮನು; ಶ್ರೇಷ್ಠ ನಾದವನು ಸಾವಿರ ಮಂದಿಗೆ ಸಮಬಲನು.
Kannada Bible (KNCL) BSI 2016
ಗಾದ್ ಗೋತ್ರದ ಈ ಕೆಲವು ಪುರುಷರು ಹಿರಿಯ ಸಹಸ್ರಾಧಿಪತಿಗಳೂ ಕಿರಿಯ ಶತಾಧಿಪತಿಗಳೂ ಆಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾದನ ಪುತ್ರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು. ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.