1 Chronicles 12:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೋರ್ಡನ್ ನದಿಯು ದಡಮೀರಿ ಹರಿಯುತ್ತಿರುವಾಗ ಗಾದ್ ಕುಲದವರು ಅದನ್ನು ದಾಟಿ ಆಚೆಪ್ರದೇಶದಲ್ಲಿ ವಾಸವಾಗಿದ್ದ ಜನರನ್ನೆಲ್ಲಾ ಪೂರ್ವಕ್ಕೂ ಪಶ್ಚಿಮಕ್ಕೂ ಓಡಿಸಿ ಅವರ ಸ್ಥಳವನ್ನು ಆಕ್ರಮಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನ್ ನದಿಯು ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರವ ಎಲ್ಲರನ್ನೂ ಓಡಿಸಿಬಿಟ್ಟರು.
Kannada BSI Bible 2016
ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತಿರುವಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಪಶ್ಚಿಮ ಪ್ರದೇಶಗಳವರೆಲ್ಲರನ್ನೂ ಓಡಿಸಿಬಿಟ್ಟವರು ಇವರೇ.
Kannada Bible (KNCL) BSI 2016
ಜೋರ್ಡನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತ ಇದ್ದಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವಪಶ್ಚಿಮ ಪ್ರದೇಶದಲ್ಲಿದ್ದವರೆಲ್ಲರನ್ನು ಓಡಿಸಿಬಿಟ್ಟವರು ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಮೊದಲನೆಯ ತಿಂಗಳಲ್ಲಿ ಯೊರ್ದನ್ ಹೊಳೆ ದಡಮೀರಿ ಹರಿಯುತ್ತಿದ್ದಾಗ, ಅದನ್ನು ದಾಟಿ ಪೂರ್ವ ಕಡೆಯಲ್ಲಿಯೂ, ಪಶ್ಚಿಮ ಕಡೆಯಲ್ಲಿಯೂ ತಗ್ಗುಗಳಲ್ಲಿ ಇರುವವರೆಲ್ಲರನ್ನು ಓಡಿಸಿಬಿಟ್ಟರು.