1 Chronicles 12:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.
Kannada BSI Bible 2016
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.
Kannada Bible (KNCL) BSI 2016
ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.