1 Chronicles 12:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ದುಷ್ಟ ಜನರ ವಿರುದ್ಧವಾಗಿ ಮಾಡಿದ ಯುದ್ಧದಲ್ಲಿ ಅವರು ಸಹಾಯಮಾಡಿದರು. ಈ ದುಷ್ಟ ಜನರು ದೇಶದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾ ದರೋಡೆ ಮಾಡುತ್ತಿದ್ದರು. ಮನಸ್ಸೆಕುಲದಿಂದ ಸೇರಿದ ಜನರೆಲ್ಲಾ ಧೈರ್ಯಶಾಲಿಗಳಾಗಿದ್ದರು. ಅವರು ದಾವೀದನ ಸೈನ್ಯದಲ್ಲಿ ಅಧಿಕಾರಿಗಳಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುದ್ಧವೀರರೂ, ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆ ಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.
Kannada BSI Bible 2016
ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಣವೀರರೂ ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.
Kannada Bible (KNCL) BSI 2016
ಇವರು ಪ್ರಖ್ಯಾತ ಯುದ್ಧವೀರರಾಗಿದ್ದು ದಾವೀದನ ಸೇನಾಪಡೆಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿದರು. ಅನಂತರ ಇಸ್ರಯೇಲಿನ ಸೇನೆಯಲ್ಲಿಯೂ ಮುಖ್ಯಸ್ಥರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.