1 Chronicles 12:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಿನದಿಂದ ದಿನಕ್ಕೆ ಹೆಚ್ಚೆಚ್ಚು ಜನರು ಬಂದು ದಾವೀದನನ್ನು ಸೇರಿಕೊಂಡಿದ್ದರಿಂದ ದಾವೀದನ ಸೈನ್ಯವು ಬಲಗೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು.
Kannada BSI Bible 2016
ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು; ಅವನ ಸೈನ್ಯವು ದೇವಸೈನ್ಯದಷ್ಟು ದೊಡ್ಡದಾಯಿತು.
Kannada Bible (KNCL) BSI 2016
ದಾವೀದನ ಸೈನ್ಯಕ್ಕೆ ಪ್ರತಿದಿನವೂ ಹೊಸಬರು ಬಂದು ಸೇರುತ್ತಾ ಇದ್ದುದರಿಂದ ಅವನ ಸೈನ್ಯವು ಸಂಖ್ಯೆಯಲ್ಲಿ ಅಧಿಕಾಧಿಕವಾಗಿ ಬೆಳೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಕಾಲದಲ್ಲಿ ದಿನೇ ದಿನೇ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವವರೆಗೆ, ದಾವೀದನಿಗೆ ಸಹಾಯ ಕೊಡುವುದಕ್ಕೆ ಅವನ ಕಡೆಗೆ ಬರುತ್ತಿದ್ದರು.