1 Chronicles 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ನಾಯಕರು ಅಹೀಯೆಜೆರ್ ಮತ್ತು ಯೋವಾಷ್ (ಇವರಿಬ್ಬರೂ ಗಿಬೆಯದವನಾದ ಹಷ್ಷೆಮಾಹನ ಗಂಡುಮಕ್ಕಳು); ಅಜ್ಮಾವೆತನ ಗಂಡುಮಕ್ಕಳಾದ ಯೆಜೀಯೇಲ್ ಮತ್ತು ಪೆಲೆಟ; ಅನತೋತ್ ಊರಿನವರಾದ ಬೆರಾಕಾ ಮತ್ತು ಯೇಹು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,
Kannada BSI Bible 2016
ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ - ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಹೆಸರುಗಳುಳ್ಳ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು, ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು, ಅನತೋತ ಊರಿನವರಾದ ಯೇಹು ಬೆರಾಕಾರು,
Kannada Bible (KNCL) BSI 2016
ಅವರು ಗಿಬೇಯದ ಶೇಮಾನ ಮಕ್ಕಳಾದ ಅಹೀಯೆಜೆರ್ ಮತ್ತು ಯೋವಾಷ ಎಂಬವರ ನೇತೃತ್ವದಲ್ಲಿ ಇದ್ದರು. ಆ ಸೈನಿಕರ ಹೆಸರುಗಳು:- ಯೇಜೀಯೇಲ್ ಮತ್ತು ಪೆಲೆಟ - ಅಜ್ಮಾವೆತನ ಮಕ್ಕಳು. ಯೇಹು ಮತ್ತು ಬೆರಾಕ - ಅನತೋತ ಊರಿನವರು. ಇಷ್ಮಾಯ - ಗಿಬ್ಯೋನಿನವನು; ಪ್ರಸಿದ್ಧನಾದ ಸೈನಿಕ, ‘ಮೂವತ್ತು ಪ್ರಮುಖರ’ ಪಟಾಲಮಿನಲ್ಲಿ ಒಬ್ಬ. ಯೆರೆಮೀಯ, ಯಹಜೀಯೇಲ್, ಯೋಹಾನಾನ್, ಯೋಜಾಬಾದ್ - ಗೆದೇರಾ ಊರಿನವರು. ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯ - ಇವರು ಹರೀಫ್ಯದವರು. ಎಲ್ಕಾನ, ಇಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಮ - ಇವರು ಕೋರಹನ ಗೋತ್ರದವರು. ಯೋವೇಲ ಮತ್ತು ಜೆಬದ್ಯ - ಗೆದೋರಿನ ಯೆರೋಹಾಮನ ಮಕ್ಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು.