1 Chronicles 12:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.
Kannada BSI Bible 2016
ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು;
Kannada Bible (KNCL) BSI 2016
ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.