1 Chronicles 12:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೋರ್ಡನ್ ಹೊಳೆಯ ಪೂರ್ವಪ್ರಾಂತ್ಯದಲ್ಲಿದ್ದ ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧಕುಲಗಳಿಂದ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ. ಇವರು ಎಲ್ಲಾ ತರದ ಆಯುಧಗಳಲ್ಲಿ ಪರಿಣತರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು.
Kannada BSI Bible 2016
ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನಿನ ಆಚೆಯಲ್ಲಿದ್ದ ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳಿಂದ ಸರ್ವಾಯುಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ.
Kannada Bible (KNCL) BSI 2016
ಜೋರ್ಡನ್ ಪೂರ್ವದಲ್ಲಿದ್ದ ಗೋತ್ರಗಳು - ರೂಬೇನ್, ಗಾದ್ ಮತ್ತು ಪೂರ್ವ ಮನಸ್ಸೆ: ಎಲ್ಲಾ ರೀತಿಯ ಆಯುಧಗಳನ್ನು ಪ್ರಯೋಗಿಸಲು ತರಬೇತಿ ಹೊಂದಿದ 120,000 ಪುರುಷರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊರ್ದನ್ ನದಿ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು 1,20,000 ಮಂದಿ.