1 Chronicles 12:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರೆಲ್ಲರೂ ಧೈರ್ಯಶಾಲಿ ಯೋಧರಾಗಿದ್ದರು. ಇವರೆಲ್ಲಾ ದಾವೀದನನ್ನು ಅರಸನನ್ನಾಗಿ ಮಾಡುವ ಉದ್ದೇಶದಿಂದ ಹೆಬ್ರೋನಿಗೆ ಬಂದರು. ದಾವೀದನು ತಮ್ಮ ಅರಸನಾಗುವುದಕ್ಕೆ ಇಸ್ರೇಲಿನ ಬೇರೆ ಜನರೆಲ್ಲರೂ ಒಪ್ಪಿಗೆಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.
Kannada BSI Bible 2016
ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನನ್ನು ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡುವದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲ್ಯರು ದಾವೀದನಿಗೆ ರಾಜ್ಯಾಭಿಷೇಕ ಮಾಡುವದರಲ್ಲಿ ಏಕಮನಸ್ಸುಳ್ಳವರಾಗಿದ್ದರು.
Kannada Bible (KNCL) BSI 2016
ಯುದ್ಧಸನ್ನದ್ಧರಾದ ಈ ಎಲ್ಲಾ ಸೈನಿಕರು ಸಮಸ್ತ ಇಸ್ರಯೇಲರ ಮೇಲೆ ದಾವೀದನನ್ನು ಅರಸನನ್ನಾಗಿ ಮಾಡಲು ದೃಢನಿರ್ಧಾರ ಮಾಡಿಕೊಂಡು ಹೆಬ್ರೋನಿಗೆ ಹೋದರು. ಇಸ್ರಯೇಲರಲ್ಲಿ ಉಳಿದವರೆಲ್ಲರೂ ಇದೇ ಉದ್ದೇಶದಿಂದ ಒಂದಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು.