1 Chronicles 13:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಆ ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.
Kannada BSI Bible 2016
ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮುಂದೆ ಸತ್ತನು.
Kannada Bible (KNCL) BSI 2016
ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸಿದರು. ಅವನು ಅಲ್ಲಿಯೇ ದೇವರ ಮುಂದೆ ಮರಣಹೊಂದಿದನು.