1 Chronicles 13:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ, “ಪೆರೆಚ್‌ಉಜ್ಜ” ಎಂಬ ಹೆಸರೇ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.
Kannada BSI Bible 2016
ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚ್ಉಜ್ಜ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
Kannada Bible (KNCL) BSI 2016
ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.