1 Chronicles 13:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನೆಯಲ್ಲಿ ದೇವರ ಒಡಂಬಡಿಕೆಯ ಪೆಟ್ಟಿಗೆಯು ಮೂರು ತಿಂಗಳ ಕಾಲವಿತ್ತು. ಯೆಹೋವನು ಆ ಮನೆಯನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.
Kannada BSI Bible 2016
ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮಂಜೂಷವು ಓಬೇದೆದೋಮನ ಮನೆಯ ಬಳಿಯಲ್ಲಿ ಸ್ವಂತ ಆಲಯದೊಳಗೆ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
Kannada Bible (KNCL) BSI 2016
ಅದು ಅಲ್ಲಿ ಮೂರು ತಿಂಗಳು ಇತ್ತು. ಸರ್ವೇಶ್ವರ ಆ ಅವಧಿಯಲ್ಲಿ ಓಬೇದೆದೋಮನ ಕುಟುಂಬವನ್ನೂ ಅವನಿಗೆ ಇದ್ದುದೆಲ್ಲವನ್ನೂ ಆಶೀರ್ವದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮಂಜೂಷವು ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ, ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದರು.