1 Chronicles 13:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗೆಂದನು, “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ‘ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.
Kannada BSI Bible 2016
ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಸಮಸ್ತಸಮೂಹದವರಿಗೆ - ನಿಮ್ಮ ಸಮ್ಮತಿಯೂ ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವದಾದರೆ ನಾವು ಎಲ್ಲಾ ಇಸ್ರಾಯೇಲ್‍ಪ್ರಾಂತಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಶೀಘ್ರವಾಗಿ ಕರೇಕಳುಹಿಸೋಣ.
Kannada Bible (KNCL) BSI 2016
“ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಇಸ್ರಾಯೇಲಿನ ಸಮಸ್ತ ಜನರಿಗೆ, “ನಿಮಗೆ ಒಳ್ಳೆಯದಾಗಿ ಕಂಡರೆ, ನಮ್ಮ ದೇವರಾದ ಯೆಹೋವ ದೇವರ ಚಿತ್ತವಾದರೆ, ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲದರಲ್ಲಿ ಉಳಿದಿರುವ ನಮ್ಮ ಸಹೋದರರನ್ನೂ, ತಮ್ಮ ಪಟ್ಟಣಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕರನ್ನೂ, ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೆಯಕಳುಹಿಸಿ,