1 Chronicles 13:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬೀನಾದ್ವಾನ ಮನೆಯಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ಎತ್ತಿ ಒಂದು ಹೊಸ ಬಂಡಿಯಲ್ಲಿಟ್ಟರು. ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ನಡೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.
Kannada BSI Bible 2016
ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೇವಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.
Kannada Bible (KNCL) BSI 2016
ಅಬೀನಾದಾಬಿನ ಮನೆಯಿಂದ ಆ ದೇವಮಂಜೂಷವನ್ನು ಹೊರಗೆ ತಂದು, ಒಂದು ಹೊಸ ಎತ್ತಿನ ಬಂಡಿಯ ಮೇಲಿಟ್ಟರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡೆಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.