1 Chronicles 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.
Kannada BSI Bible 2016
ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತೂರಿ ಇವುಗಳ ಧ್ವನಿಯೊಡನೆ ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ದೇವರ ಮುಂದೆ ನರ್ತನ ಮಾಡುತ್ತಾ ಹೋದರು.
Kannada Bible (KNCL) BSI 2016
ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ದೇವರ ಮುಂದೆ ಹೋದರು.