1 Chronicles 14:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.
Kannada BSI Bible 2016
ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವದಕ್ಕೋಸ್ಕರ ದೂತರನ್ನೂ ದೇವದಾರು ಮರಗಳನ್ನೂ ಶಿಲ್ಪಿಗಳನ್ನೂ ಬಡಗಿಯವರನ್ನೂ ಅವನ ಬಳಿಗೆ ಕಳುಹಿಸಿದನು.
Kannada Bible (KNCL) BSI 2016
ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.