1 Chronicles 14:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಯೆಹೋವನಿಗೆ, “ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗಬಹುದೇ?” ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ, “ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು.
Kannada BSI Bible 2016
ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
“ಫಿಲಿಷ್ಟಿಯರ ಮೇಲೆ ನಾನು ದಾಳಿಮಾಡಬಹುದೊ? ನೀವು ನನಗೆ ಜಯವನ್ನು ಕೊಡುವಿರೋ\, ಎಂದು ದಾವೀದನು ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸಿದನು. “ಹೌದು, ಅವರನ್ನು ಎದುರಿಸು, ನಾನು ನಿನಗೆ ಜಯವನ್ನು ಕೊಡುವೆನು,” ಎಂದು ಸರ್ವೇಶ್ವರ ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.