1 Chronicles 14:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು.
Kannada BSI Bible 2016
ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು ಅಂದನು.
Kannada Bible (KNCL) BSI 2016
ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.