1 Chronicles 14:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳಿದಂತೆಯೇ ದಾವೀದನು ಮಾಡಿದನು. ದಾವೀದನೂ ಅವನ ಸೈನಿಕರೂ ಫಿಲಿಷ್ಟಿಯರನ್ನು ಸೋಲಿಸಿ ಗಿಬ್ಯೋನಿನಿಂದ ಹಿಡಿದು ಗೆಜೆರ್ ಪಟ್ಟಣದವರೆಗೂ ಅವರನ್ನು ಕೊಲ್ಲುತ್ತಾ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು.
Kannada BSI Bible 2016
ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು; ಇಸ್ರಾಯೇಲ್ಯರು ಫಿಲಿಷ್ಟಿಯ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನವರೆಗೂ ಸಂಹರಿಸುತ್ತಾ ಹೋದರು.
Kannada Bible (KNCL) BSI 2016
ಸರ್ವೇಶ್ವರ ಹೇಳಿದಂತೆಯೇ ದಾವೀದನು ಮಾಡಿದನು. ಫಿಲಿಷ್ಟಿಯರನ್ನು ಗಿಬ್ಯೋನಿನಿಂದ ಗೆಜೆರಿನವರೆಗೂ ಹಿಮ್ಮೆಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು.