1 Chronicles 14:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನನ್ನು ಇಸ್ರೇಲರ ಅರಸನನ್ನಾಗಿ ಆಗಲೇ ಮಾಡಿದ್ದಾನೆಂದು ದಾವೀದನಿಗೆ ತಿಳಿದುಬಂತು. ಆತನು ದಾವೀದನ ಸಾಮ್ರಾಜ್ಯವನ್ನು ವಿಸ್ತರಿಸಿ ಬಲಿಷ್ಠಗೊಳಿಸಿದನು. ಯೆಹೋವನು ದಾವೀದನನ್ನೂ ಇಸ್ರೇಲರನ್ನೂ ಪ್ರೀತಿಸಿದ್ದರಿಂದ ಹಾಗೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.
Kannada BSI Bible 2016
ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ದಾವೀದನು ದೇವಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ತನ್ನ ರಾಜ್ಯವು ಉನ್ನತಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.
Kannada Bible (KNCL) BSI 2016
ಹೀಗೆ ದಾವೀದನು ದೇವಪ್ರಜೆಗಳಾದ ಇಸ್ರಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿ ತನ್ನನ್ನು ಇಸ್ರಯೇಲ್ ರಾಜನನ್ನಾಗಿ ಸ್ಥಿರಪಡಿಸುವರೆಂದು ತಿಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ, ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.