1 Chronicles 14:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಇಸ್ರೇಲರ ಅರಸನಾಗಿ ಆರಿಸಲ್ಪಟ್ಟಿದ್ದನ್ನು ಕೇಳಿ ಎಲ್ಲಾ ಫಿಲಿಷ್ಟಿಯರು ಅವನೊಂದಿಗೆ ಯುದ್ಧಮಾಡಲು ಬಂದರು. ದಾವೀದನು ಇದನ್ನು ಅರಿತು ಯುದ್ಧಸನ್ನದ್ಧನಾಗಿ ಫಿಲಿಷ್ಟಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ಅವನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ತಾನೂ ಅವರನ್ನೆದುರಿಸಲು ಹೋದನು.
Kannada BSI Bible 2016
ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು; ದಾವೀದನು ಇದನ್ನು ಕೇಳಿ ತಾನೂ ಅವರೆದುರಿಗೆ ಹೋದನು.
Kannada Bible (KNCL) BSI 2016
ದಾವೀದನು ಇಸ್ರಯೇಲರೆಲ್ಲರ ಇಡೀ ನಾಡಿಗೆ ಅರಸನಾಗಿ ಅಭಿಷಿಕ್ತನಾಗಿದ್ದಾನೆಂಬ ವರ್ತಮಾನವನ್ನು ಫಿಲಿಷ್ಟಿಯರು ಕೇಳಿದರು. ಅವನನ್ನು ಸೆರೆಹಿಡಿಯಲು ತಮ್ಮ ಸೈನ್ಯವನ್ನು ಕಳುಹಿಸಿದರು. ದಾವೀದನು ಅವರನ್ನು ಎದುರಿಸಲು ಸಿದ್ಧನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆದುರಾಗಿ ಹೊರಟನು.
Recommended Reading