1 Chronicles 15:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದ್ವಾ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,
Kannada BSI Bible 2016
ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದಾವೀದನು ಚಾದೋಕ್ ಎಬ್ಯಾತಾರರೆಂಬ ಯಾಜಕರನ್ನೂ ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್, ಅಮ್ಮೀನಾದಾಬ್ ಎಂಬ ಲೇವಿಯರನ್ನೂ ಕರೆದು ಅವರಿಗೆ -
Kannada Bible (KNCL) BSI 2016
ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಚಾದೋಕನು, ಅಬಿಯಾತರನು ಎಂಬ ಯಾಜಕರನ್ನೂ; ಉರೀಯೇಲನು, ಅಸಾಯನು, ಯೋಯೇಲನು, ಶೆಮಾಯನು, ಎಲೀಯೇಲನು, ಅಮ್ಮೀನಾದಾಬನು ಎಂಬ ಲೇವಿಯರನ್ನೂ ಕರೆಕಳುಹಿಸಿ ಅವರಿಗೆ,