1 Chronicles 15:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
Kannada BSI Bible 2016
ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವೂ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿರುವ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
Kannada Bible (KNCL) BSI 2016
“ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ್ದರಿಂದ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ನಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ, ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.