1 Chronicles 15:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.
Kannada BSI Bible 2016
ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು
Kannada Bible (KNCL) BSI 2016
ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.