1 Chronicles 15:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ಲೇವಿಯರ ಪ್ರಧಾನರಿಗೆ - ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ ಕಿನ್ನರಿ ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹ ಧ್ವನಿಮಾಡುವದಕ್ಕಾಗಿ ನೇವಿುಸಿರಿ ಎಂದು ಆಜ್ಞಾಪಿಸಲು
Kannada Bible (KNCL) BSI 2016
ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಾವೀದನು ವಾದ್ಯಗಳನ್ನೂ ವಿಶೇಷವಾದ ವೀಣೆಗಳನ್ನೂ, ಕಿನ್ನರಿಗಳನ್ನೂ, ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನೂ ಎತ್ತುವ ಹಾಗೆ, ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವುದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.