1 Chronicles 15:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.
Kannada BSI Bible 2016
ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ
Kannada Bible (KNCL) BSI 2016
‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.