1 Chronicles 15:24 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಇವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವಾಗ ತುತ್ತೂರಿ ಊದುವ ಕೆಲಸವನ್ನು ಕೊಟ್ಟನು. ಓಬೇದೆದೋಮ್ ಮತ್ತು ಯೆಹೀಯ ಒಡಂಬಡಿಕೆಯ ಪೆಟ್ಟಿಗೆಗೆ ಕಾವಲುಗಾರರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.
Kannada BSI Bible 2016
ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್‌ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ, ಎಲೀಯೆಜೆರ್ ಎಂಬ ಯಾಜಕರು ತುತೂರಿಗಳನ್ನು ಊದುತ್ತಾ ದೇವಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್, ಯೆಹೀಯ ಎಂಬವರು ಮಂಜೂಷಾಲಯದ ದ್ವಾರಪಾಲಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.