1 Chronicles 15:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನೂ ಇಸ್ರೇಲಿನ ಹಿರಿಯರೂ ಮುಖಂಡರೂ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ಹೋದರು. ಅವರು ಅದನ್ನು ಓಬೇದೆದೋಮನ ಮನೆಯಿಂದ ಹೊರತಂದರು. ಎಲ್ಲರಿಗೂ ಸಂತೋಷವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,
Kannada BSI Bible 2016
ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ನಿಬಂಧನ ಮಂಜೂಷವನ್ನು
Kannada Bible (KNCL) BSI 2016
ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ದಾವೀದನೂ, ಇಸ್ರಾಯೇಲಿನ ಹಿರಿಯರೂ, ಸಹಸ್ರಾಧಿಪತಿಗಳೂ ಸಂತೋಷವಾಗಿ ಓಬೇದ್ ಏದೋಮನ ಮನೆಯೊಳಗಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.