1 Chronicles 15:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದನು. ಅಲ್ಲಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.
Kannada BSI Bible 2016
ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉತ್ಸವದಿಂದ ತರುತ್ತಿರುವಾಗ ಅದನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದರಿಂದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞಮಾಡಿದರು.
Kannada Bible (KNCL) BSI 2016
ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದ್ದರಿಂದ, ಅವರು ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.