1 Chronicles 15:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.
Kannada BSI Bible 2016
ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಎಲ್ಲಾ ಇಸ್ರಾಯೇಲ್ಯರು ಆರ್ಭಟಿಸುತ್ತಾ ಕೊಂಬು ತುತೂರಿಗಳನ್ನು ಗಟ್ಟಿಯಾಗಿ ಊದುತ್ತಾ ತಾಳಹೊಡೆಯುತ್ತಾ ಕಿನ್ನರಿ ಸ್ವರಮಂಡಲಗಳನ್ನು ಬಾರಿಸುತ್ತಾ ಯೆಹೋವನ ನಿಬಂಧನಮಂಜೂಷವನ್ನು ತಂದರು.
Kannada Bible (KNCL) BSI 2016
ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.