1 Chronicles 15:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಬಂಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.
Kannada BSI Bible 2016
ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರನ್ನು ಯೆರೂಸಲೇವಿುಗೆ ಕರಸಿದನು.
Kannada Bible (KNCL) BSI 2016
ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.