1 Chronicles 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
Kannada BSI Bible 2016
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
Kannada Bible (KNCL) BSI 2016
ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.