1 Chronicles 16:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,
Kannada BSI Bible 2016
ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ.
Kannada Bible (KNCL) BSI 2016
ಸರ್ವೇಶನಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I ಕದಲದ ಸ್ಥಿರತೆಯನು ಇತ್ತಿಹನೀ ಧರೆಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ.