1 Chronicles 16:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
Kannada BSI Bible 2016
ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ ಎಂಬದೇ. ಅವರು ಹೀಗೆ ಹಾಡಿದ್ದಕ್ಕೆ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
Kannada Bible (KNCL) BSI 2016
ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ, ಜನರೆಲ್ಲರೂ, “ಆಮೆನ್,” ಎಂದು ಹೇಳಲಿ. ನೀವು, “ಯೆಹೋವ ದೇವರನ್ನು ಸ್ತುತಿಸಿರಿ,” ಎಂದು ಹೇಳಿದರು.